Latest

ದ್ವಿತೀಯ ಪಿಯು ರಿಪೀಟರ್ಸ್ ಗೆ ಭರ್ಜರಿ ಸಿಹಿ ಸುದ್ದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ರಿಪೀಟರ್ಸ್ ಗೆ ಸಿಹಿ ಸುದ್ದಿ ನೀಡಿದ್ದು, ರಿಪಿಟರ್ಸ್ ಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ತಿಳಿಸಿದೆ.

ಈ ಕುರಿತು ಹೈಕೋರ್ಟ್ ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ ದ್ವಿತೀಯ ಪಿಯು ರೆಗ್ಯೂಲರ್ ವಿದ್ಯಾರ್ಥಿಗಳನ್ನು ಮಾತ್ರವಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು. ರೀಪೀಟರ್ಸ್ ಗಳಿಗೆ ಶೇ.35ರಷ್ಟು ಅಂಕ ನೀಡಲಾಗುವುದು ಎಂದು ವಿವರ ಸಲ್ಲಿಸಿದೆ. ಇದೇ ವೇಳೆ ಹೈಕೋರ್ಟ್, ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವಂತೆ ಆದೇಶ ನೀಡಿದೆ.

ಈ ಬಾರಿ ದ್ವಿತಿಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿತ್ತು. ಸರ್ಕಾರದ ತಾರತಮ್ಯ ನೀತಿ ಖಂಡಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದ ನಡೆಗೆ ಚಾಟಿ ಬೀಸಿತ್ತು. ಪಾಸ್ ಮಾಡುವುದಾದರೆ ಎಲ್ಲರನ್ನೂ ಪಾಸ್ ಮಾಡಿ ಇಲ್ಲವೇ ಪರೀಕ್ಷೆ ನಡೆಸಿ ಎಂದು ಸೂಚಿಸಿತ್ತು.

ಸಿಎಂ ಬಿಎಸ್ ವೈ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button