EducationKannada NewsKarnataka NewsLatestUncategorized

*ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಟಾಪರ್ ಗಳ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ದ್ವೀತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.

ಈ ಬಾರಿ ಶೇ.81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ, ಕೊಡಗು ಐದನೇ ಸ್ಥಾನದಲ್ಲಿದೆ. ಗದಗ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ವಿದ್ಯಾಲಕ್ಷ್ಮೀ 600 ಅಂಕಗಳಿಗೆ 598 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

Home add -Advt

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೂವರು ಟಾಪರ್ ಗಳು ಇದ್ದು ಮೇಧಾ ಡಿ 600 ಅಂಕಕ್ಕೆ 596 ಅಂಕಗಳನ್ನು ಪಡೆದಿದ್ದಾರೆ. ವೇದಾಂತ್ 596 ಅಂಕಗಳನ್ನು ಪಡೆದಿದ್ದು, ಕವಿತಾ 596 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಜ್ಞಾನವಿ 600 ಅಂಕಗಳಿಗೆ 597 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

karresults.nic.in ಹಾಗೂ pue.kar.nic ನಲ್ಲಿ ಫಲಿತಾಂಶ ನೋಡಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button