EducationKarnataka NewsLatest

*ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಟಾಪರ್ಸ್ ಲಿಸ್ಟ್ ಈ ಕೆಳಗಿನಂತಿದೆ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಬಳಿಕ ಇಂದು ಸಂಜೆ 6 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಫೆ.28ರಿಂದ ಮಾರ್ಚ್ 17ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಫಲಿತಾಂಶ ಪ್ರಕಟವಾಗಿದೆ.

Home add -Advt

ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್‌ https://karresults.nic.in ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ.

ಕರ್ನಾಟಕ ಒನ್ ಮೊಬೈಲ್ ಆ್ಯಪ್‌ ನಲ್ಲಿ ಸಿಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ SMS ಮೂಲಕ ಫಲಿತಾಂಶದ ಮಾಹಿತಿ ರವಾನೆಯಾಗುತ್ತದೆ. ಇನ್ನು ಈ ವರ್ಷ ಪ್ರಥಮ ಬಾರಿಗೆ ಡಿಜಿಲಾಕರ್‌ನಲ್ಲೂ https://www.digilocker.govt.in ನಲ್ಲೂ ರಿಸಲ್ಟ್‌ ವೀಕ್ಷಿಸಬಹುದಾಗಿದೆ.

ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಶೇ.80ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.

ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದಿಶಾ ಎಂಬ ವಿದ್ಯಾರ್ಥಿನಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಗೀತಾ ಹಾಗೂ ಅರ್ಚನಾ ಎಂಬ ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಗೀತಾ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾ‘ನ ವಿಭಾಗದಲ್ಲಿ ಶ್ರೀಲಯ ಎಂಬ ವಿದ್ಯಾರ್ಥಿನಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ.


Related Articles

Back to top button