ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. 12ನೇ ತರಗತಿ ಫಲಿತಾಂಶ ತಿರಸ್ಕರಿಸಿದ್ದ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನಡೆದಿದ್ದ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 18,413 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.ಅವರಲ್ಲಿ 5,507 ವಿದ್ಯಾರ್ಥಿಗಳು ಪಾಸ್ ಆಗಿದ್ದು, 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದರು.
ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಹೈಯಸ್ಟ್ ಮಾರ್ಕ್ಸ್ ಆಗಿದ್ದು, ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಹಾಗೂ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಹೇಳಿದರು.
http://karresults.nic.in ಲಿಂಕ್ ನಲ್ಲಿಯೂ ಫಲಿತಾಂಶ ಲಭ್ಯವಿದೆ
ಮೂರನೇ ಅಲೆ ಆತಂಕದ ನಡುವೆ ಮಕ್ಕಳ ಸರ್ವೆಯಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ