
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ೨೦೧೮-೧೯ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದವರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಬೆಳಗಾವಿಯ ಕೆ.ಎಲ್.ಇ. ಸಂಸ್ಥೆಯ ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿ ಸರಸ್ವತಿ ಮೆಳಗೆ ಇವರು 3 ವರ್ಷದ ಎಲ್.ಎಲ್.ಬಿ. ಕೋರ್ಸಿನಲ್ಲಿ ವಿಶ್ವವಿದ್ಯಾಲಯಕ್ಕೆ 2ನೇ ರ‍್ಯಾಂಕ್ ಪಡೆದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಕಾರ‍್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ