
ಪ್ರಗತಿವಾಹಿನಿ ಸುದ್ದಿ: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಪೊಲೀಸರು ಬರೋಬ್ಬರಿ 3.16 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ ಬರೋಬ್ಬರಿ 3.16 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಅಶೋಕ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಆರೋಪಿಗಳ ಬಳಿ ಇದ್ದ ಮೂರು ಕೆಜಿ 169 ಗ್ರಾಂ ಎಂಡಿಎಂಎ ಸೀಜ್ ಮಾಡಲಾಗಿದೆ.
ಡ್ರಗ್ಸ್ ಪ್ರಕರಣ ಸಂಬಂಧ ಓರ್ವ ನೈಜೀರಿಯಾ ಮೂಲದ ಪ್ರಜೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.




