ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಲಕ್ಷ್ಮಿ ತಾಯಿ ಕೋ ಆಪರೇಟಿವ್ ಸೊಸೈಟಿ ಚೇರಮನ್ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆಯನ್ನು ನೆರವೇರಿಸಿದರು.
ಕಾಮಗಾರಿಗೆ ಒಟ್ಟೂ 3.80 ಕೋಟಿ ರೂ, ತಗುಲಲಿದ್ದು, ಸಾರ್ವಜನಿಕರಿಗೆ ಹಾಗೂ ರಸ್ತೆಗೆ ತೊಂದರೆಯಾಗದಂತೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಇಡೀ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಶಾಲಾ ಕಟ್ಟಡ, ದೇವಸ್ಥಾನ ಜೀರ್ಣೋದ್ಧಾರ ಮೊದಲಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದಾಗಿ ಹಲವೆಡೆ ತೊಂದರೆಯಾಗಿದ್ದರೂ ಧೈರ್ಯಗುಂದದೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಕಾಮಗಾರಿ ಮುಂದುವರಿಸುತ್ತಿದ್ದಾರೆ. ಜನರ ಪ್ರೀತಿ, ಪ್ರೋತ್ಸಾಹ ಹಾಗೂ ಆಶಿರ್ವಾದದಿಂದಾಗಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ.ಗಳನ್ನು ತರಲು ಸಾಧ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ, ಉಪಾಧ್ಯಕ್ಷರಾದ ರತ್ನವ್ವ ಕೋಲಕಾರ, ಸದಸ್ಯರುಗಳಾದ ಬಸನಗೌಡ ಪಾಟೀಲ, ನಾಗಯ್ಯ, ಅರ್ಜುನ, ಕಲ್ಲಪ್ಪ, ದತ್ತಾ ಬಾಂಡಿಗನಿ, ಮುರಗೇಶ, ಇಸ್ಮೈಲ್ ತಿಗಡಿ ಮುಂತಾದವರು ಉಪಸ್ಥಿತರಿದ್ದರು.
ಸೋಲಾರ್ ದೀಪ ಉದ್ಘಾಟನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಚನ್ನರಾಜ ಹಟ್ಟಿಹೊಳಿ ಅವರು, ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವವನ್ನು ಸಲ್ಲಿಸಿ, ಪುತ್ಥಳಿಯ ಎದುರಿಗೆ ಅಳವಡಿಸಲಾದ ಸೋಲಾರ್ ದೀಪವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಸದಸ್ಯ ನಿಲೇಶ ಚಂದಗಡ್ಕರ್, ಸಿದ್ದಪ್ಪ ಕಾಂಬಳೆ, ರಾಕೇಶ್ ಬುರುಡ, ಜೈನುಲ್ಲಾ ಕುಡಚಿ, ಶಹಬಾಜ್ ಶೇಖ್, ಶೀತಲ್ ಜಕ್ಕನ್ನವರ, ಪ್ರವೀಣ ಮುರಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ