
ಪ್ರಗತಿವಾಹಿನಿ ಸುದ್ದಿ: ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಮಕ್ಕಳ ಆಟ, ಮೋಜುಗಳಿಗೆ ಬ್ರೇಕ್ ಇಲ್ಲದಂತಾಗಿದೆ. ರಜೆಯ ಮಜಾದಲ್ಲಿ ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಅಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಈಜಲು ಇಳಿದಿದ್ದ ವೇಳೆ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ.
ವಿಷ್ಣು, ನಿಹಾಲ್ ಹಾಗೂ ಹರ್ಷವರ್ಧನ್ ಮೃತ ಬಾಲಕರು. ಕೆರೆಯ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.