*ಈಜಲು ಹೋಗಿದ್ದಾಗ ದುರಂತ; ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಈಜಲು ಹೋಗಿದ್ದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ (10) ಮೃತ ಬಾಲಕರು. ಕೆರೆಯಲ್ಲಿ ಈಜಲೆಂದು ಇಳಿದಿದ್ದಾಗ ಮೂವರು ಬಾಲಕರು ನೀರುಪಾಲಾಗಿ ದುರಂತ ಅಂತ್ಯಕಂಡಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಬಾಲಕರ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದೆ.Home add -Advt *ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*