*ನಟ ಚೇತನ್ ಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನ್ಯಾಯಾಂಗ ಬಂಧನಕ್ಕೆ ಗುರಿಯಾಗಿದ್ದ ನಟ ಚೇತನ್ ಗೆ ಜಾಮೀನು ಮಂಜೂರಾಗಿದೆ.

ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ನಟ ಚೇತನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.

ಚೇತನ್ ಪರ ವಕೀಲರು ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 32ನೇ ಎಸಿಎಂಎಂ ಕೋರ್ಟ್ ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಭದ್ರತೆ ನಿಡಲು ಸೂಚನೆ ನೀಡಿದೆ.

Related Articles

Back to top button