ಪ್ರಗತಿವಾಹಿನಿ ಸುದ್ದಿ, ಬೆಂಗಳೂರು- ರಾಜ್ಯಾದ್ಯಂತ ನಾಳೆಯಿಂದ 3 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ ಹೊರಬಿದ್ದಿದೆ.
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸಿಎಂ ಬೊಮ್ಮಾಯಿ .
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ.
ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿವಾದ ವಿಕೋಪಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದ ುರಾತ್ರಿ ಬೆಂಗಳೂರಿಗೆ ವಾಪಸ್ ಆದ ನಂತರ ಕಾಲೇಜುಗಳಿಗೆ ರಜೆ ನೀಡುವ ಸಂಬಂಧ ನಿರ್ಧರಿಸುವುದಾಗಿ ಕೆಲವೇ ಹೊತ್ತಿನ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ಇದೀಗ 3 ದಿನ ರಜೆ ಘೋಷಿಸಲಾಗಿದೆ.
ರಾಜ್ಯಾದ್ಯಂತ ಶಾಲೆ, ಕಾಲೇಜು ಬಂದ್: ಇಂದು ರಾತ್ರಿಯೇ ನಿರ್ಧಾರ – CM
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ