Latest

ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜಿಗೆ ಹೋಗಲು ನಿಂತಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.

22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ ಶಿಲ್ಪಾ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಮೊದಲ ವರ್ಷದ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಅಕ್ಟೋಬರ್ 10ರಂದು ಬೆಳಿಗ್ಗೆ ಕಾಲೇಜಿಗೆ ಹೋಗಲು ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯ ಬಳಿ ಬಿಎಂಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದ ವಿದ್ಯಾರ್ಥಿನಿ ಶಿಲ್ಪಾ ಮೇಲೆಯೇ ಬಸ್ ಹರಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಬನ್ನೇರುಘಟ್ಟದ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Home add -Advt

ಕಳೆದ 12 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ವಿಧ್ಯಾರ್ಥಿನಿ ಕೊನೆಗೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ. ಅಪಘಾತದ ಬೆನ್ನಲ್ಲೇ ಬೆಂಗಳೂರು ವಿವಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಬಿಎಂಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆಸ್ಪತ್ರೆಯ ಖರ್ಚು ವೆಚ್ಚವನ್ನು ಬಿಎಂಟಿಸಿ ಸಂಸ್ಥೆಯೇ ನೋಡಿಕೊಳ್ಳುವುದಾಗಿ ತಿಳಿಸಿತ್ತು.

ಮೃತ ಶಿಲ್ಪಾ ಕುಟುಂಬಕ್ಕೆ ಪರಿಹಾರ ನೀಡುವಂತೆ ವಿದ್ಯಾರ್ಥಿ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿವೆ.

ಅಂಗವಿಕಲನ ಮೇಲೆ ಹರಿದ KSRTC ಬಸ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

https://pragati.taskdun.com/latest/ksrtc-busaccidenthandicap-man-death/

Related Articles

Back to top button