Kannada NewsKarnataka NewsLatest

*ಸಮುದ್ರ ಪಾಲಾಗುತ್ತಿದ್ದ ಮೂವರು ಯುವತಿಯರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದು ಈಜಲು ಇಳಿದಿದ್ದ ವೇಳೆ ಸಮುದ್ರಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರನ್ನು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಬಳಿಯ ಕುಡ್ಲೆ ಬೀಚ್ ನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ಜಯನಗರದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಸ್ಮಿತಾ ರವಿಚಂದ್ರನ್, ನಿಹಾರಿಕಾ ಗಿರಿ ಹಾಗೂ ಪವಿತ್ರಾ ಸುಂದರನ್ ಎಂಬುವವರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಕುಡ್ಲೆ ಬೀಚ್ ಗೆ ಪ್ರವಾಸಕ್ಕೆಂದು ಯುವತಿಯರು ಬಂದಿದ್ದರು. ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಲೈಫ್ ಗಾರ್ಡ್ ಗಳ ಸಮಯಪ್ರಜ್ಞೆಯಿಂದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ.

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button