Kannada NewsKarnataka NewsLatest

3 ತಿಂಗಳ ಮಗು ಪತ್ತೆ: ಪೋಷಕರ ಮಾಹಿತಿ ನೀಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:   ಡಿಸೆಂಬರ್ ೩ ರಂದು ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಅನಾಥವಾಗಿ ಸಿಕ್ಕ ಮೂರು ತಿಂಗಳ ಗಂಡು ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ರಕ್ಷಣೆ ಮಾಡಿದೆ.
ಮಕ್ಕಳ ಕಲ್ಯಾಣ ಸಮಿತಿ ಅವರು ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ದತ್ತು ಸ್ವೀಕಾರ ಕೇಂದ್ರದಲ್ಲಿ ಅಭಿರಕ್ಷಣೆಗಾಗಿ ಮಗುವನ್ನು ಇಟ್ಟಿದ್ದು, ಮಗುವಿನ ಪಾಲಕರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಾಜಿ ನಗರ, ೩ನೇ ಅಡ್ಡರಸ್ತೆ, ವೀಕ್ಷಣಾಲಯ ಆವರಣ, ಬೆಳಗಾವಿ ದೂರವಾಣಿ ಸಂಖ್ಯೆ ೦೮೩೧-೨೪೭೪೧೧೧ ಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button