ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದ್ದ ವೇಳೆ ಮೈಸೂರಿನ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿದ್ದು, ಮೂವರ ವಿರುದ್ಧ ದೂರು ದಾಖಲಾಗಿದೆ.
ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ.
ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಹಿಂದಿನಂತೆ ದಾಖಲೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಫೋನ್ ಪೇ ಮೂಲಕ ಮೊದಲ ಹಂತದ ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ