Kannada NewsKarnataka NewsLatestPolitics

*ಸ್ಪೀಕರ್ ಕೋಪಕ್ಕೆ ಮೂವರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನದಿಂದ ಎದ್ದು ಹೊರ ನಡೆದ ಸ್ಪೀಕರ್ ಯು.ಟಿ. ಖಾದರ್​​ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್​​ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ನೀಟಿಸ್ ನೀಡಲಾಗಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್‌ ಶಾಲಿನಿ ರಜನೀಶ್​​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಅಂತಿಮವಾಗಿ ಸ್ವೀಕರ್​ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲ ಶಾಸಕರಿಗೆ ಉತ್ತರ ಸಿಗಬೇಕು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕರೆಲ್ಲರೂ ಸೇರಿ ಚರ್ಚಿಸಿದ್ದೇವೆ. ಎಲ್ಲರಿಗೂ ಉತ್ತರ ಸಿಗುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿರೋದಾಗಿ ಸ್ಪೀಕರ್​ ಖಾದರ್​​ ಮಾಹಿತಿ ನೀಡಿದ್ದಾರೆ.

Home add -Advt

Related Articles

Back to top button