CrimeKarnataka NewsLatest

*BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆ: ಮಗಳಿಂದಲೇ ತಂದೆ-ತಾಯಿ-ಸಹೋದರಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಮಗಳಿಂದಲೇ ತಂದೆ-ತಾಯಿ ಹಾಗೂ ಸಹೋದರಿ ಮೂವರು ಕೊಲೆಯಾಗಿರುವ ಘೋರ ಘಟನೆ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಆರ್.ಪುರಂನ ಸೀಗೆಹಳ್ಳಿ ಮನೆಯಲ್ಲಿ ಈ ಘಟನೆ ನಡೆದಿದೆ. ತಂದೆ ಸೋಮಸುಂದರ (55) ತಾಯಿ ಲಕ್ಷ್ಮೀ (48) ಹಾಗೂ ಸಹೋದರಿ ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳು.

ಪ್ರಿಯಕರ ಕೆನತ್ ಜೊತೆ ಸೇರಿ ಮಗಳು ಶ್ವೇತಾಳೇ ಈ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button