*ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಶಾಲೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದ ಪ್ರಕರಣ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿತ್ತು. ಇದೀಗ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಧರ್ಮಪ್ರಕಾಶ್, ಮನು ಹಾಗೂ ಮಹೇಂದ್ರ ಎಂಬುವವರ ಮೂವರು ಮಕ್ಕಳು ಬುಧವಾರ ಬೆಳಿಗ್ಗೆ ಶಲಎಗೆ ಹೋಗುತ್ತೇವೆ ಎಂದು ಹೋದವರು ಏಕಾಏಕಿ ನಾಪತ್ತೆಯಾಗಿದ್ದರು. ಆತಂಕಗೊಂಡ ಪೋಷಕರು ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ನಾಪತ್ತೆಯಾಗಿದ್ದ ಓರ್ವ ವಿದ್ಯಾರ್ಥಿ ಬಳಿ ಮೊಬೈಲ್ ಇತ್ತು. ಮೊಬೈಲ್ ಲೊಕೇಶನ್ ಆಧರಿಸಿ ಪೊಲೀಸರು ವಿದ್ಯಾರ್ಥಿಗಳನ್ನು ಪತ್ತೆ ಮಾಡಿದ್ದಾರೆ. … Continue reading *ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಪತ್ತೆ*