ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕೆರೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟಿ ಗ್ರಾಮದಲ್ಲಿ ನಡೆದಿದೆ.
ರಾಜೇಶ್ (13), ಸಾಯಿ (13), ಹಲೀಮ್ (13) ಮೃತ ವಿದ್ಯಾರ್ಥಿಗಳು. ಈಜಲೆಂದು ಕೆರೆಯಲ್ಲಿ ಇಳಿದಾಗ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳೀಯರ ನೆರವಿನಿಂದ ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಕೆರೆಯಿಂದ ಮೇಲಕೆತ್ತಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ