Kannada NewsLatestNational

*ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದು ಹೋದ ಆಟೋ: 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಏಕಾಏಕಿ ಬಂದ ಆಟೋ ಹರಿದು ಹೋದ ಘಟನೆ ನಡೆದಿದೆ. ಆಟೋದ ಚಕ್ರದಡಿ ಸಿಲುಕಿದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೂರು ವರ್ಷದ ಬಾಲಕಿ ಮೃತ ಮಗು. ತಮಿಳುನಾಡಿನ ರಾಮನಾಥಪುರಂ ಚಿನ್ನ ಕಡೈ ಬೀದಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಮೇಲೆಯೇ ಆಟೋ ಹರಿದು ಹೋಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರುಯಾಗದೇ ಕೊನೆಯುಸಿರೆಳೆದಿದ್ದಾಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button