Cancer Hospital 2
Beereshwara 36
LaxmiTai 5

*ಮತ್ತೊಂದು ದುರಂತ: ನೀರಿನ ಹೊಂಡಕ್ಕೆ ಬಿದ್ದು ಮಗು ದುರ್ಮರಣ*

Anvekar 3

ಪ್ರಗತಿವಾಹಿನಿ ಸುದ್ದಿ; ಉಡುಪಿ: ನೀರಿನ ಹೊಂಡಕ್ಕೆ ಬಿದ್ದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ದು ಸಮೀಪ ಈ ದುರಂತ ಸಂಭವಿಸಿದೆ. 3 ವರ್ಷದ ಕೃತಿಕಾ ಮೃತ ಮಗು.

ಅಜ್ಜಿ ಮಂಜುಳಾ ಜೊತೆ ನಡೆದು ಹೋಗುತ್ತಿದ್ದಾಗ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಮಗು ಬಿದ್ದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Emergency Service

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Bottom Add3
Bottom Ad 2