![](https://pragativahini.com/wp-content/uploads/2022/09/Digital-Rape.jpg)
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮೂರು ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ನಿರ್ಜನ ಪ್ರದೇಶವೊಂದಲ್ಲಿ ಮೂರು ವರ್ಷದ ಬಾಲಕಿ ಗಂಭೀರ ಸ್ಥಿತಿಯಲ್ಲಿ ಕೆಲವು ಕೆಲಸಗಾರರಿಗೆ ಪತ್ತೆಯಾಗಿದ್ದಾಳೆ. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಮಗುವಿನ ಮೇಲೆ ಪೈಶಾಚಿಕ ಕೃತ್ಯವೆಸಗಿದ್ದಾನೆ. ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ