Belagavi NewsBelgaum NewsKannada NewsKarnataka NewsNationalPolitics

*ಕುಂಭಮೇಳದ ಕಾಲ್ತುಳಿತದಲ್ಲಿ 30 ಜನರ ದುರ್ಮರಣ: 25 ಜನರ ಗುರುತು ಪತ್ತೆ*

ಪ್ರಗತಿವಾಹಿನಿ ಸುದ್ದಿ : ಬೆಳಗಿನ ಜಾವ 1-2 ಗಂಟೆಯ ನಡುವೆ ನಡೆದ ಮಹಾ ಕುಂಭ ಮೇಳದ ಕಾಲ್ತುಳಿತದಲ್ಲಿ 30 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪೈಕಿ 25 ಜನರನ್ನು ಗುರುತಿಸಲಾಗಿದ್ದು, ಉಳಿದ 5 ಜನರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಹಾಕುಂಬ್ ಡಿಐಜಿ ವೈಭವ್‌ ಕೃಷ್ಣ ಮಾಹಿತಿ ನೀಡಿದ್ದಾರೆ.

ಪವಿತ್ರ ಸ್ನಾನಕ್ಕೆ ಆಗಮಿಸಿದ್ದವರಲ್ಲಿ ಕಾಲ್ತುಳಿತದಲ್ಲಿ 90 ಭಕ್ತರು ಗಾಯಗೊಂಡಿದ್ದಾರೆ ಎಂದು ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಐಜಿ ಅವರು, 25 ಮೃತ ದೇಹಗಳ ಗುರುತು ಪತ್ತೆ ಮಾಡಲಾಗಿದೆ. ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದ ಒಬ್ಬರು, ಆಸ್ಸಾಂನ ಒಬ್ಬರು ಸಾವನ್ನಪ್ಪಿದ್ದಾರೆ. 25 ಜನರ ಗುರುತು ಪತ್ತೆಯಾಗಿದೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ. ಸಾರ್ವಜನಿಕರು 1920 ಹೆಲ್ಪ್ ಲೈನ್ ನಂಬ‌ರ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button