Latest

31.50 ಲಕ್ಷ ರೂ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು

ಸಂಸದ ಪ್ರಕಾಶ ಹುಕ್ಕೇರಿ ಮನವಿಗೆ ಸ್ಪಂದನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಪ್ರಕಾಶ ಹುಕ್ಕೇರಿ ಅವರ ಮನವಿಗೆ ಸ್ಪಂದಿಸಿರುವ ಪ್ರಧಾನ ಮಂತ್ರಿಯವರ ಕಾರ್ಯಾಲಯ ಒಟ್ಟು ೩೧ ಲಕ್ಷ ೫೦ ಸಾವಿರ ರೂ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು ಮಾಡಿದೆ. 
ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಹಾಗೂ ಪಟ್ಟಣಗಳಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಜನರ ಉಪಚಾರಕ್ಕಾಗಿ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಕೋರಿ ಸಂಸದ ಹುಕ್ಕೇರಿ ಪ್ರಧಾನ ಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಪ್ರಧಾನ ಮಂತ್ರಿಗಳ ಕಾರ್ಯಾಲಯ ೧೬ ಫಲಾನುಭವಿಗಳಿಗೆ ಒಟ್ಟು ೩೧ ಲಕ್ಷ ೫೦ ಸಾವಿರ ರೂ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಬಿಡುಗಡೆ ಮಾಡಿದೆ ಎಂದು ಸಂಸದ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button