
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಏ.26ರಂದು ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಂದ ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿಗಳನ್ನು ತುಮಕೂರಿನಿಂದ ಗಡಿಪಾರು ಮಾಡಲಾಗಿದೆ.
ಈ ಬಗ್ಗೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಮಾಹಿತಿ ನೀಡಿದ್ದು, ಇತ್ತೀಚೆಗೆ ಕುಖ್ಯಾತ ರೌಡಿ ಕುಣಿಗಲ್ ಗಿರಿ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಆತ ಸೇರಿದಂತೆ ಸೇರಿದಂತೆ 31 ರೌಡಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಸಾರ್ವಜನಿಕ ವಲಯದಲ್ಲಿ ಅಶಾಂತಿ ಹರಡುವ 1200 ರೌಡಿಗಳ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ