ಪ್ರಗತಿವಾಹಿನಿ ಸುದ್ದಿ: ಪೂರ್ವ ಅಫ್ಘಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಮಳೆಯ ಆರ್ಭಟಕ್ಕೆ ಕನಿಷ್ಠ 35 ಜನರು ಮೃತಪಟ್ಟಿದ್ದು, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಗುಡುಗು ಸಹಿತ ಮಳೆ, ಸುಂಟರಗಾಳಿ, ಭೂಕುಸಿತಗಳಿಂದ ಈ ಅನಾಹುತ ಉಂಟಾಗಿದೆ. ಅನೇಕ ವಸತಿ ಗೃಹಗಳು, ಮನೆಗಳು, ಮರಗಳು ಕುಸಿದು ಹೆಚ್ಚಿನ ಹಾನಿ ಸಂಭವಿಸಿದೆ. ಚಂಡಮಾರುತದ ವೇಳೆ ಮನೆಯ ಮೇಲ್ಟಾವಣಿ ಕುಸಿದು ಒಂದೇ ಕುಟುಂಬದ ಐವರು ಅಸು ನೀಗಿದ್ದಾರೆ ಎಂದು ತಿಳಿದು ಬಂದಿದೆ. ಒಂದು ತಿಂಗಳ ಹಿಂದೆ, ಉತ್ತರ ಅಫ್ಘಾನಿಸ್ತಾನದಲ್ಲಿ ಮೇ ತಿಂಗಳಲ್ಲಿ ಮಳೆ ಮತ್ತು ಪ್ರವಾಹದಿಂದ 300 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಅಪಘಾನಿಸ್ಥಾನದಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದ ಏರಿಳಿತಗಳು ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ ಮತ್ತು ಜೀವನೋಪಾಯಕ್ಕೆ ದಾರಿ ಇಲ್ಲದಂತೆ ಸಂಕಷ್ಟಕ್ಕೆ ಗುರಿ ಮಾಡಿದೆ. ಈ ದೇಶದಲ್ಲಿ ದೇಶದಲ್ಲಿ ಮಾನವೀಯ ಬಿಕ್ಕಟ್ಟನ್ನು ಉಲ್ಬಣಗೊಳಿಸಿದೆ ಎಂದು ಸ್ಥಳೀಯಾಡಳಿತ ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ