Latest

*37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತರಾಗಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಜನವರಿ 9 ಹಾಗೂ10 ರಂದು ನಡೆಯಲಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ ಎಂದು ಕೆಯುಡಬ್ಲ್ಯುಜೆ ರಾಜ್ಯಾದ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಶ್ರೀಗಳ ಅಗಲಿಕೆಯ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಮ್ಮೇಳನವನ್ನು ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ವಿನಂತಿಸಿದೆ. ವಿಜಯಪುರ ಜಿಲ್ಲಾಡಳಿತ ಮತ್ತು ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಅಭಿಪ್ರಾಯವೂ ಇದೇ ಆಗಿದೆ. ಈ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡುವುದು ಅನಿವಾರ್ಯವಾಗಿದೆ, ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಸಮ್ಮೇಳನದ ಮುಂದಿನ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದಿದ್ದಾರೆ.

Related Articles

ಜ.9ಕ್ಕೆ ಕೆಯುಡಬ್ಲ್ಯೂಜೆ ಸಭೆ:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಸರ್ವ ಸದಸ್ಯರ ಸಭೆಗಳು ಮಾತ್ರ ಈಗಾಗಲೇ ನಿಗಧಿಯಾಗಿರುವಂತೆ ದಿನಾಂಕ 9.1.2023 ರಂದು ಸೋಮವಾರ (ವಿಜಯಪುರ ಬದಲಿಗೆ) ಹಾಸನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

*ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲೇನಿದೆ?*

https://pragati.taskdun.com/siddeshwara-swamijilast-latterjnanayogashrama/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button