Karnataka News

*ಈ ಜಿಲ್ಲೆಗಳಲ್ಲಿ ಮುಂದುವರಿದ ಭಾರಿ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ಇನ್ನೂ ಮೂರುದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ವಿಜಯನಗರ, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button