
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,967 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಸೋಂಕಿಗೆ ದೇಶದಾದ್ಯಂತ 100 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
ಈ ಮೂಲಕ ಕೊರೊನಾ ಸೋಂಕು ದೇಶದಲ್ಲಿ ಸಾಮೂದಾಯಿಕವಾಗಿವ್ಯಾಪಕವಾಗಿ ಹರಡುತ್ತಿದ್ದು, ಈವರೆಗೆ ಒಟ್ಟು 81,970 ಜನ ಈ ವೈರಸ್ ಪೀಡಿತರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 2,649ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸುಮಾರು 27,920 ಜನ ಈ ಸಾಂಕ್ರಾಮಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕಳೆದ ಮಾರ್ಚ್ 25 ರಂದು ದೇಶದಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಮೂರನೇ ಹಂತದ ಲಾಕ್ ಡೌನ್ ಮೇ. 17ಕ್ಕೆ ಮುಕ್ತಾಯವಾಗಲಿದೆ. ಕೊರೊನ ಅಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ