Kannada NewsKarnataka NewsLatest

*ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ: ರಾಜಭವನ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ:

Home add -Advt

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟನೆ ನೀಡಿದೆ.

ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಸರ್ಕಾರಕ್ಕೆ ವಾಪಾಸ್ ಕಳುಹಿಸಲಾಗಿದೆ ಹೊರತು ತಿರಸ್ಕರಿಸಿಲ್ಲ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.12ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಕುರಿತ ಮಸೂದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿ, ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದ್ದಾರೆ.

Related Articles

Back to top button