Election NewsKannada NewsKarnataka NewsPolitics

4.8 ಕೋಟಿ ಸೀಜ್: ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಪಡೆಯಲಾಗಿದ್ದು, ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇರೆಗೆ ಡಾ. ಕೆ ಸುಧಾಕರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.

ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ತಂಡ ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4. 8 ಕೋಟಿ ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ವಶಪಡಿಸಿಕೊಂಡಿರುವುದಾಗಿ ಶುಕ್ರವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

Home add -Advt

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಏಪ್ರಿಲ್ 25 ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.‌

Related Articles

Back to top button