Belagavi NewsBelgaum NewsKannada NewsKarnataka NewsLatestPolitics
*ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭೆ ಅಧಿವೇಶನದಲ್ಲಿ ಇಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕರಿಸಲಾಯಿತು.
ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ನಿರ್ಣಯ ಅಂಗೀಕಾರ ಪಡೆಯಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಇದೇ ವೇಳೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ಇಡುವಂತೆ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಶಾಸಕ ಅಬ್ಬಯ್ಯ ಪ್ರಸಾದ್ ಒತ್ತಾಯಿಸಿದರು.