Kannada NewsKarnataka NewsLatest
*ಈಜಲು ತೆರಳಿದ್ದ ವೇಳೆ ದುರಂತ; ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಶಾಲೆಗಳಿಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಾಡಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.
ಜೀವನ್ (13), ಸಾತ್ವಿಕ್ (11), ವಿಶ್ವ (12) ಹಾಗೂ ಪೃಥ್ವಿ (12) ಮೃತ ಮಕ್ಕಳು. ಈಜಲೆಂದು ಕೆರೆಗೆ ಇಳಿದಿದ್ದ ವೇಳೆ ನೀರಿನ ಸುಳಿಗೆ ಸಿಕ್ಕಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಒಬ್ಬರನ್ನು ರಕ್ಷಿಸಲು ಹೋಗಿ ಮತ್ತೊಬ್ಬರು ಹೀಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹಾಸನದ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ