
ಪ್ರಗತಿವಾಹಿನಿ ಸುದ್ದಿ; ತುಮಕೂರು: ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.
ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು, ಪೋಷಕರಲ್ಲಿ ಆತಂಕ ಎದುರಾಗಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮೀ ಹಾಗು ಭಾನು ಕಣ್ಮರೆಯಾಗಿರುವ ಮಕ್ಕಳು. ನಾಲ್ವರು ಮಕ್ಕಳು 15-16 ವರ್ಷದವರಾಗಿದ್ದಾರೆ.
ಶನಿವಾರ ಮಧ್ಯಾಹ್ನ ಆಟವಾಡಲೆಂದು ಮನೆಯಿಂದ ಹೊರ ಹೋದ ಮಕ್ಕಳು ಈವರೆಗೂ ವಾಪಸ್ ಆಗಿಲ್ಲ. ಎರಡು ದಿನಗಳಿಂದ ಪೋಷಕರು ಮಕ್ಕಳನ್ನು ಊರುನಾದ್ಯಂತ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಗಾಬರಿಗೊಂಡಿರುವ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ