ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮುಂದುವರೆಸಿದ್ದು, ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಎನ್.ಸತೀಶ್ ಕುಮಾರ್ ಅವರನ್ನು ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ಮುಂದುವರಿಸಲಾಗಿದೆ. 2 ದಿನಗಳ ಹಿಂದಷ್ಟೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಲಾಬುರಾಮ್ ಅವರನ್ನು ಐಜಿಪಿ ಗುಪ್ತಚರ ಇಲಾಖೆ, ರಮಣಗುಪ್ತಾ ಅವರನ್ನು ಡಿಐಜಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರನ್ನಾಗಿ
ಅನುಪಮ್ ಅಗರ್ವಾಲ್ ಅವರನ್ನು ಕಲಬುರ್ಗಿಯ ಆಗ್ನೇಯ ವಲಯ ಡಿಐಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇತ್ತೀಚೆಗೆ ಹಲವು ಪೊಲೀಸ್ ಇನ್ಸ್ ಪೆಕ್ಟರ್, ಡಿಜಿಪಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಜಾರ ಈಗ ನಾಲ್ವರು ಪ್ರಮುಖ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
*ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
https://pragati.taskdun.com/satish-jarakiholiyamakanamaradihudali-zp/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ