Latest

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನ ಎರಡು ಪದವೀಧರ ಕ್ಷೇತ್ರಗಳಿಗೆ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.

ವಾಯುವ್ಯ ಪದವೀಧರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರದು ಮತದಾನ ನಡೆಯಲಿದೆ. ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 8ರಿಂದ ಸಂಜೆ 4ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಮೇ 19ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆ ದಿನವಾಗಿದೆ.

Home add -Advt

ಪದವೀಧರ ಕ್ಷೇತ್ರದ ಸದಸ್ಯರಾಗಿರುವ ಹನುಮಂತ ನಿರಾಣಿ, ಶ್ರೀಕಂಠೇಗೌಡ ಹಾಗೂ ಶಿಕ್ಷಕರ ಕ್ಷೇತ್ರದ ಬಸವರಾಜ್ ಹೊರಟ್ಟಿ, ಅರುಣ ಶಹಾಪುರ ಅವರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.

ನೀವು ತೊಂದರೆ ತೆಗೆದುಕೊಳ್ಳಬೇಡಿ; ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದ ನಟಿ ರಮ್ಯಾ

Related Articles

Back to top button