Latest

*ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ.

ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಈ ದುರಂತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

Home add -Advt

ದೇವೇಂದ್ರಪ್ಪ, ನಿರ್ಮಲಾ ಹಾಗೂ ಅವಳಿ ಮಕ್ಕಳಾದ ಚೈತ್ರಾ, ಚೈತನ್ಯ ಮೃತ ದುರ್ದೈವಿಗಳು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಸಾಲಗಾರರ ಕಾಟಕ್ಕೆ ಹಾಗೂ ಇನ್ನಿತರ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಮೂಲದ ಕುಟುಂಬ ಮಾರ್ಚ್ 27ರಂದು ಮಂಗಳೂರಿನ ಕರುಣಾ ಲಾಡ್ಜ್ ಗೆ ಬಂದು ರೂಮ್ ಬುಕ್ ಮಾಡಿತ್ತು. ನಿನ್ನೆ ಸಂಜೆ ರೂಮ್ ಖಾಲಿ ಮಾಡುವುದಾಗಿ ಹೇಳಿದ್ದರು. ಆದರೆ ಇಂದು ಬೆಳಿಗ್ಗೆಯಾದರೂ ರೂಮ್ ಚೆಕೌಟ್ ಮಾಡದಿದ್ದಾಗ ಲಾಡ್ಜ್ ಸಿಬ್ಬಂದಿಗಳು ಪರಿಶೀಲಿಸಿದ್ದಾರೆ. ಈ ವೇಳೆ ಕುಟುಂಬವೇ ಆತ್ಮಹಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ದೇವೇಂದ್ರಪ್ಪ ಹೆಂಡತಿ ಹಾಗೂ ಇಬ್ಬರು ಅವಳಿ ಮಕ್ಕಳಿಗೆ ವಿಷಕೊಟ್ಟು ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button