ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಜಿಲ್ಲೆಯ ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನತ್ತ ಓಟ ಮುಂದುವರಿಸಿದ್ದಾರೆ. ಗೆಲ್ಲುವ ಎಲ್ಲರಿಗೂ ಮಂತ್ರಿಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಆಶ್ವಾಸನೆಯಂತೆ ಜಿಲ್ಲೆಯ ಮೂವರಿಗೂ ಸಚಿವಸ್ಥಾನ ಲಭಿಸಲಿದೆ.
ಇದರ ಜೊತೆಗೆ, ಉಮೇಶ ಕತ್ತಿಗೆ ಸಚಿವ ಸ್ಥಾನ ನೀಡದಿದ್ದರೆ ನನ್ನನ್ನು ಬಿಡ್ತಾರಾ ಎಂದೂ ಯಡಿಯೂರಪ್ಪ ಪ್ರಶ್ನಿಸಿದ್ದರು. ಅಂದರೆ ಬೆಳಗಾವಿ ಜಿಲ್ಲೆಗೆ ಇನ್ನೂ ನಾಲ್ಕು ಸಚಿವಸ್ಥಾನ ಲಭಿಸುವ ಸಾಧ್ಯತೆ ಇದೆ. ಆದರೆ, ಇದಕ್ಕೆಲ್ಲ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಬೇಕು.
ಬೆಳಗಾವಿ ಜಿಲ್ಲೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆರಂಭದಿಂದಲೂ ಸಾಕಷ್ಟು ಅಂತರ ಕಾಯ್ದುಕೊಂಡು ಗೆಲುವಿನತ್ತ ಮುನ್ನಡೆದಿದ್ದಾರೆ. ಕಾಗವಾಡದಲ್ಲಿ 10 ಸಾವಿರ, ಗೋಕಾಕದಲ್ಲಿ 12 ಸಾವಿರ ಹಾಗೂ ಅಥಣಿಯಲ್ಲಿ 17 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿಗಳು ಮುಂದಿದ್ದಾರೆ.
ರಾಜ್ಯದ 15 ಕ್ಷೇತ್ರಗಳ ಪೈಕಿ ಯಲ್ಲಾಪುರದಲ್ಲಿ ಬಿಜೆಪಿಯ ಶಿವರಾಮ ಹೆಬ್ಬಾರ್ ಗೆಲುವು ಸಾದಿಸಿದ್ದಾರೆ. ಉಳಿದಂತೆ 10 ಕ್ಷೇತ್ರಗಳಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್, 1ರಲ್ಲಿ ಜೆಡಿಎಸ್ ಹಾಗೂ 1ರಲ್ಲಿ ಪಕ್ಷೇತರರು ಮುಂದಿದ್ದಾರೆ.
10 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ, ಬೆಳಗಾವಿಯ ಮೂರರಲ್ಲೂ ಬಿಜೆಪಿಗೆ ಅಂತರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ