ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ: ವಿಧಾನ ಮಂಡಲದ ಮುಂಗಾರು ಅಧಿವೇಶನ ಆರಂಭವಾಗಿರುವಾಗಲೇ ರಾಜ್ಯದ ನಾಲ್ವರು ಸಚಿವರು ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ ನಡೆದಿದೆ. ಇಡಿ ಬಳಸಿ ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ತನಿಖೆ ನಡೆಸುತ್ತಿರುವ ವೇಳೆ ಒತ್ತಡ ಹೇರುವ ಯತ್ನ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಭಾವಿಗಳ ಹೆಸರನ್ನು ಹೇಳುವಂತೆ ಬಲವಂತವಾಗಿ ಹೇಳಿಸಲಾಗುತ್ತಿದೆ. ಇಲ್ಲದಿದ್ದಲ್ಲಿ ಇಡಿ ಪವರ್ ತೋರಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಧಾನಸಭಾ ಚುನಾವಣೆ ಸೋಲಿನಿಂದ ಬಿಜೆಪಿ ಈಗ ಕರ್ನಟಕ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಐಟಿ, ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ವಿಪಕ್ಷಗಳ ಸರ್ಕಾರ ಇರುವ ರಾಜ್ಯಗಳ ಮೇಲೆ ಐಟಿ, ಇಡಿ ದಾಳಿ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ