ಭಗವದ್ಗೀತೆ ಅಭಿಯಾನದ ಹಿಂದೆ 4 ಉದ್ದೇಶ – ಸ್ವರ್ಣವಲ್ಲೀ ಸ್ವಾಮೀಜಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಕ್ತಿತ್ವ ಪುನರುತ್ಥಾನ​, ನೈತಿಕತೆ ಪುನರುತ್ಥಾನ​, ಸಾಮಾಜಿಕ ಸಾಮರಸ್ಯ​ ಹಾಗೂ ರಾಷ್ಟ್ರೀಯ ಭಾವೈಕ್ಯತೆ​ – ಈ 4 ಉದ್ದೇಶ​ವಿಟ್ಟುಕೊಂಡು ಕಳೆದ 17 ವರ್ಷಗಳಿಂದ ನಿರಂತರವಾಗಿ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ. ಬೆಳಗಾವಿಯಲ್ಲಿ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಗುರುದೇವ ರಾನಡೆ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಮಾಜಗಳ ಪ್ರಮುಖರನ್ನು ಉದ್ದೇಶಿಸಿ … Continue reading  ಭಗವದ್ಗೀತೆ ಅಭಿಯಾನದ ಹಿಂದೆ 4 ಉದ್ದೇಶ – ಸ್ವರ್ಣವಲ್ಲೀ ಸ್ವಾಮೀಜಿ