Kannada NewsKarnataka NewsLatest
*ಈಜಲು ಹೋಗಿ ದುರಂತ ಅಂತ್ಯ; ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿ ನಾಲ್ವರು ಕಾವೇರಿ ನದಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದಿದೆ.
ಮೈಸೂರಿನಿಂದ ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ 40 ಜನರು ಬಸ್ ನಲ್ಲಿ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಓರ್ವ ಈಜಲು ತೆರಳಿದ್ದ. ಆತ ನೀರಿನಲ್ಲಿ ಮುಳುಗುತ್ತಿರುವುದು ಕಂಡು ಆತನನ್ನು ರಕ್ಷಿಸಲೆಂದು ಹೋದ ಮೂವರು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಒಟ್ಟು ನಾಲ್ವರು ಕಾವೇರಿ ನದಿ ಪಾಲಾಗಿ ಸಾವನ್ನಪ್ಪಿದ್ದಾರೆ.
ನಾಗೇಶ್ (40), ಭರತ್ (17), ಗುರು (32), ಮಹದೇವ್ (16) ಮೃತರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕಾಗಿ ಪೊಲೀಸರು ಹಾಗೂ ಅಗ್ನಿಶಮಕ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ.



