National

*ಯುಗಾದಿ ಹಬ್ಬದ ದಿನವೇ ದುರಂತ: ಕೆರೆಯಲ್ಲಿ ಮುಳುಗಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಯಲ್ಲಾರೆಡ್ಡಿ ಅಲೂಕಿನ ವೆಂಕಟಾಪುರ ಬಳಿ ಈ ದುರಂತ ಸಂಭವಿಸಿದೆ. ತಾಯಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿ ನಾಲ್ವರು ನೀರುಪಾಲಾಗಿದ್ದಾರೆ.

ಕೆರೆಯಲ್ಲಿ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

Home add -Advt

Related Articles

Back to top button