Kannada NewsKarnataka NewsLatest

4 ನದಿ ಪಾತ್ರಗಳ ಒತ್ತುವರಿ ಸಮೀಕ್ಷೆ – ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
 ನದಿ ಪಾತ್ರದ ತೆರವು ಕುರಿತು ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಸಿ ಅವರು ಮಾತನಾಡಿದರು.
ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖವಾಗುತ್ತಿತ್ತು. ಆದರೆ ಈಗ ಜಲಾಶಯಗಳಲ್ಲಿ ಹೂಳು ತುಂಬಲು ಹಾಗೂ ನೀರು ಸಂಗ್ರಹ ಪ್ರಮಾಣ ಕಡಿಮೆಯಾಗಲು ಒತ್ತುವರಿಯೇ ಕಾರಣ.  ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.
ಅಗತ್ಯತೆ ಆಧರಿಸಿ ಸಮೀಕ್ಷೆ ಬಳಿಕ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ತೀರ್ಮಾನಿಸಲಾಗುವುದು.  ಈಗಾಗಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಾಥಮಿಕ ಸಮೀಕ್ಷೆ  ನಡೆಸಿದ್ದಾರೆ. ಸಮಗ್ರ ಸಮೀಕ್ಷೆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದರು.
ನದಿಪಾತ್ರದ ಅತಿಕ್ರಮಣ ಆಗಿರುವುದು ಸತ್ಯ. ಒತ್ತುವರಿ ತೆರವುಗೊಳಿಸಿದರೆ ಪ್ರವಾಹ ನಿಯಂತ್ರಣ ಸಾಧ್ಯ ಎಂದೂ ಸಚಿವರು ಹೇಳಿದರು.
 ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button