*ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದು ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ; ಸದ್ಯದ ಟ್ರೆಂಡ್ ಇಲ್ಲಿದೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ; ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಒಂದು ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಮಧ್ಯಪ್ರದೇಶ, ರಾಜಸ್ಥಾನ ಹಾಗು ಛತ್ತೀಸ್ ಗಢದಲ್ಲಿ ಬಿಜೆಪಿ ತೀವ್ರ ಮುನ್ನಡೆಯಲ್ಲಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಖಚಿತವಾಗಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 165 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಮಾಜಿಕ್ ಸಂಖ್ಯೆ 116.
ರಾಜಸ್ಥಾನದಲ್ಲಿ ಬಿಜೆಪಿ 111 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಹಾಗೂ ಇತರೆ 19 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಮಾಜಿಕ್ ಸಂಖ್ಯೆ 100.
ಛತ್ತೀಸ್ ಗಢದಲ್ಲಿ ಬಿಜೆಪಿ 54 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 34 ಹಾಗೂ ಇತರೆ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ಸಂಖ್ಯೆ 46.
ತೆಲಂಗಾಣದಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಆರ್ ಎಸ್ 41 ಕ್ಷೇತ್ರಗಳಲ್ಲಿ, ಬಿಜೆಪಿ 9 ಕ್ಷೇತ್ರಗಳಲ್ಲಿ ಎಐಎಂಐಎಂ 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ಸಂಖ್ಯೆ 60.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ