*ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ; ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ*
ಪ್ರಗತಿವಾಹಿನಿ ಸುದ್ದಿ;
ನವದೆಹಲಿ: ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದೆ. ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್ ಗಢ ರಾಜ್ಯಗಳಲ್ಲಿ ಈಗಗಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಬಹುತೇಕ ನಿಚ್ಚಳವಾಗಲಿದೆ.
ಸದ್ಯದ ಮಾಹಿತಿ ಪ್ರಕಾರ ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಸದ್ಯ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೇವಂತ್ ರೆಡ್ಡಿ ಕಾಮರೆಡ್ಡಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜಸ್ಥಾನದ ಟೊಂಕ್ ಕ್ಷೇತ್ರದಲ್ಲಿ ಸಚಿನ್ ಪೈಲಟ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಒಟ್ಟಾರೆ ನಾಲ್ಕುರಾಜ್ಯಗಳ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಬಹುತೇಕ ಹೊರಬೀಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ