Election NewsNational

*4 ರಾಜ್ಯಗಳಿಗೆ ಇಂದು ಚುನಾವಣೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ದೇಶದ 4 ರಾಜ್ಯಗಳಿಗೆ ಇಂದು ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಚುನಾವಣಾ ದಿನಾಂಕ ಘೋಷಿಸಲಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಜಮ್ಮು-ಕಾಶ್ಮಿರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ಘೋಷಣೆ ಮಾಡಲಿದೆ.

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿ ನಡೆಯುತ್ತಿರುವ ಚುನಾವಣೆ ಇದಾಗಿದೆ. 5ರಿಂದ 7 ಹಂತಗಳಲ್ಲಿ ಚುನವಣೆ ನಡೆಯುವ ಸಾಧ್ಯತೆ ಇದೆ.

ಇದೇ ವೇಳೆ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಉಪಚುನವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button