ಪ್ರಗತಿವಾಹಿನಿ ಸುದ್ದಿ: ಮಹಿಳೆಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರು ಟ್ರಾಫಿಕ್ ಪೊಲೀಸರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್ಸ್ ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್ ಟೇಬಲ್ ಗಳಾದ ಗಿರೀಶ್, ಹುಚ್ಚುಸಾಬ್ ಹಾಗೂ ಕಾನ್ಸ್ ಟೇಬಲ್ ಬಸಪ್ಪ ಅಮಾನತುಗೊಂಡವರು.
ಫೆ.24ರಂದು ಮಹಿಳೆಯೊಬ್ಬರನ್ನು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ನೆಪದಲ್ಲಿ ಬೆದರಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೀರಿ ಎಂದು ಧಮ್ಕಿ ಹಾಕಿ ನಾಲ್ವರು ಸಂಚಾರಿ ಪೊಲೀಸರು 8000 ರೂಪಾಯಿ ವಸೂಲಿ ಮಾಡಿದ್ದರು. ಈ ಬಗ್ಗೆ ಮಹಿಳೆಯ ತಂದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಕಮಿಷ್ನರ್ ಗೆ ಟ್ಯಾಗ್ ಮಾಡಿದ್ದರು.
ಪ್ರಕರಣದ ತನಿಖೆಗೆ ಆದೇಶಿಸಲಾಗಿತ್ತು. ಇದೀಗ ಸಂಚಾರಿ ಪೊಲೀಸರ ವಿರುದ್ಧ ಆರೋಪ ಹಿನ್ನೆಲೆಯಲ್ಲಿ ನಾಲ್ವರು ಸಂಚಾರಿ ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ