Latest

ವೈದ್ಯರ ನಿರ್ಲಕ್ಷ; ಮತ್ತೊಂದು ಮಗು ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಹಾಗೂ ಅವಳಿ ಶಿಸುಗಳು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿಯೂ ಅಂಥದ್ದೇ ಘಟನೆ ನಡೆದಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯರ ನಿರ್ಲಕ್ಷಕ್ಕೆ 4 ವರ್ಷದ ಬುದ್ಧಿಮಾಂದ್ಯ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪೋಷಕರು ಮಗುವಿನ ಶವವನ್ನು ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆ ನಡೆಸಿ, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಲಹಳ್ಳಿಯ ಡೇವಿಡ್ ಎಂಬುವವರು ತಮ್ಮ ನಾಲ್ಕುವರ್ಷದ ಮಗ ಡಾರ್ವಿನ್ ಎಂಬಾತನನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿನ ಬೆನ್ನು ಮೂಳೆಯಲ್ಲಿ ನೀರು ತುಂಬಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರು ಪೋಷಕರ ಅನುಮತಿ ಪಡೆಯದೇ ಶಶ್ತ್ರಚಿಕಿತ್ಸೆ ಮಾಡಿದ್ದಾರೆ. ಮಗುವಿನ ಬೆನ್ನಲ್ಲಿನ ನೀರು ತೆಗೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ ಪ್ರಜ್ಞೆ ಕಳೆದುಕೊಮ್ಡ ಮಗು ಸಾವನ್ನಪ್ಪಿದೆ.

ಟ್ರೈನಿ ವೈದ್ಯರ ನಿರ್ಲಕ್ಷದಿಂದ ಮಗುವಿನ ಪ್ರಾಣವೇ ಹೋಗಿದ್ದು, ಪೋಷಕರು ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
*ರಾಜ್ಯದಲ್ಲಿ 50 ಸಾವಿರ ಎಕರೆ ಲ್ಯಾಂಡ್ ಬ್ಯಾಂಕ್ ಲಭ್ಯವಿದೆ :* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

https://pragati.taskdun.com/latest/50-thousand-acres-of-land-bank-available-in-the-state-chief-minister-basavaraja-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button