National

*ಮತ್ತೊಂದು ಬೆಂಕಿ ಅವಘಡ: ಮೂವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಆಹಾರ ಸಂಸ್ಕರಣಾ ಘಟಕವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವದಹನವಾಗಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರೀಯಲ್ ಏರಿಯಾದಲ್ಲಿ ನಡೆದಿದೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 6 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸಿದ್ದಾರೆ.

ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇಡೀ ಆಹಾರ ಸಂಸ್ಕರಣಾ ಘಟಕ ವ್ಯಾಪಿಸಿದ್ದು, ಕಾರ್ಖಾನೆ ತುಂಬೆಲ್ಲ ಹೊಗೆ ತುಂಬಿಕೊಂಡಿದೆ. 14 ಅಗ್ನಿಶಾಮಕ ವಾಹನಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

Home add -Advt


Related Articles

Back to top button