Latest

ಕೊಳವೆ ಬಾವಿಗೆ ಬಿದ್ದ 4 ವರ್ಷದ ಕಂದಮ್ಮ

ಪ್ರಗತಿವಾಹಿನಿ ಸುದ್ದಿ; ಜೋಧಪುರ: ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ.

ಆಟವಾಡುತ್ತಿದ್ದ ಬಾಲಕ ಮುಚ್ಚಿದ್ದ ಕೊಳವೆಬಾವಿಯನ್ನು ಕುತೂಹಲಕ್ಕಾಗಿ ತೆಗೆದು ನೋಡಲು ಹೋಗಿದ್ದಾನೆ. ಇದೇ ವೇಳೆ ಕಾಲುಜಾರಿ 95 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಸ್ಥಳಕ್ಕೆ ಪೊಲೀಸರು, ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಧಾವಿಸಿದ್ದು, ಬಾವಿಯಲ್ಲಿ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಬಾಲಕನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಮತ್ತೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

Related Articles

Back to top button